ಮಂಡ್ಯ: ತೆಲಂಗಾಣ ವೈದ್ಯೆಯ ಅತ್ಯಾಚಾರ, ಹತ್ಯೆ ಖಂಡಿಸಿ ಪಶು ವೈದ್ಯರ ಪ್ರತಿಭಟನೆ

Update: 2019-12-03 17:26 GMT

ಮಂಡ್ಯ, ಡಿ.3: ಪಶುವೈದ್ಯೆ ಡಾ.ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಖಂಡಿಸಿ ಕರ್ನಾಟಕ ಪಶುವೈದ್ಯಕೀಯ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ನಡೆಸಿದರು.

ವಿಶ್ವೇಶ್ವರಯ್ಯ ಪ್ರತಿಮೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಅವರು, ಘೋಷಣೆಗಳನ್ನು ಕೂಗಿ ವೈದ್ಯೆ ಹತ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಿಯಾಂಕ ರೆಡ್ಡಿ ಅವರ ಪ್ರಕರಣದಿಂದ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ. ಹಳ್ಳಿಗಳಿಗೆ ತೆರಳಿ ಚಿಕಿತ್ಸೆ ನೀಡುವ ಪಶುವೈದ್ಯರ ನೈತಿಕ ಸ್ಥೈರ್ಯ ಕುಗ್ಗಿಸುವಂತಹದ್ದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಅತ್ಯಾಚಾರಿಗಳನ್ನು ನೇಣಿಗೇರಿಸಬೇಕು. ಪ್ರಕರಣಗಳು ಮರುಕಳಿಸದಂತೆ ಕಾನೂನು ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಡಾ.ಹನುಮೇಗೌಡ ಎಲ್., ಪ್ರಧಾನ ಕಾರ್ಯದರ್ಶಿ ಡಾ.ಗೋವಿಂದ ಟಿ.ಎಚ್., ಉಪಾಧ್ಯಕ್ಷ ಡಾ.ಕೃಷ್ಣಮೂರ್ತಿ ಕೆ.ಎಸ್., ಡಾ.ಅಶ್ವಿನಿ ಎಸ್., ಡಾ.ಪ್ರದೀಪ್‍ಕುಮಾರ್ ಎಂ.ಎಸ್., ಡಾ.ಪ್ರದೀಪ್‍ ಕುಮಾರ್ ಎಂ.ಎಸ್., ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News