ನರಸಿಂಗ ನಾಯ್ಕ್

Update: 2019-12-04 07:32 GMT

ಉಪ್ಪಿನಂಗಡಿ, ಡಿ.4: ಕೊಟ್ಟಿಬೆಟ್ಟು ಏಳ್ನಾಡುಗುತ್ತು ಕುಟುಂಬದ ಯಜಮಾನ, ನಿವೃತ ಸೈನಿಕ ಕೆ.ನರಸಿಂಗ ನಾಯ್ಕ್ (96) ಹೃದಯಾಘಾತದಿಂದ 34 ನೆಕ್ಕಿಲಾಡಿ ಗ್ರಾಮದ ಉದಯಗಿರಿಯ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನರಾದರು.

 ಸೇನೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಸಂದರ್ಭ ಅವರು 2ನೇ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದರು. ಮಿಲಿಟರಿಯಿಂದ ನಿವೃತರಾದ ಬಳಿಕ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತರಾಗಿ, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ