ಸಹಕಾರಿ ಚುನಾವಣೆಯಲ್ಲಿ ಕಾನೂನು ಪಾಲನೆ ಅಗತ್ಯ: ಜಯಕರ ಶೆಟ್ಟಿ

Update: 2019-12-04 14:30 GMT

ಉಡುಪಿ, ಡಿ.4: ಸಹಕಾರಿ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಆಯಾ ಸಂಸ್ಥೆಗಳ ಸಿಇಓಗಳು ಸರಕಾರದ ಸುತ್ತೋಲೆ ಗಳಂತೆ ಹಾಗೂ ಕಾನೂನು ಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಮುಂದೆ ಯಾವುದೇ ಸಮಸ್ಯೆಗಳಾದರೂ ಅದಕ್ಕೆ ಸಿಇಓಗಳೇ ಜವಾಬ್ದಾರರಾಗುತ್ತಾರೆ. ಆದುದರಿಂದ ಈ ಬಗ್ಗೆ ಎಚ್ಚರಿಕೆ ಅತಿಅಗತ್ಯ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯಲ್ಲಿ ಚುನಾವಣೆ ನಡೆಯಲಿರುವ ಎಲ್ಲ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಬುಧವಾರ ಉಡುಪಿ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾದ ಚುನಾವಣಾ ಪೂರ್ವ ತಯಾರಿ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡು ತಿದ್ದರು.

ಆಯಾ ಸಂಸ್ಥೆಗಳು ಸಿಇಓಗಳು ತಮ್ಮ ಜವಾಬ್ದಾರಿ ಮತ್ತು ಕರ್ತವ್ಯವನ್ನು ಸರಿಯಾಗಿ ಅರಿತುಕೊಂಡು ಯಾವುದೇ ರಾಜಕೀಯ ಹಾಗೂ ಗೊಂದಲ ಗಳಿಲ್ಲದೆ ಚುನಾವಣೆಯನ್ನು ನಡೆಸಬೇಕು ಎಂದ ಅವರು, 2020ರಲ್ಲಿ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಅನೇಕ ಸಹಕಾರಿ ಸಂಸ್ಥೆಗಳಲ್ಲಿ ನಿರ್ದೇಶಕರ ಮಂಡಳಿಗೆ ಚುನಾವಣೆ ನಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 180-190 ಸಂಸ್ಥೆಗಳಲ್ಲಿ ಚುನಾವಣೆ ಜರಗಲಿದೆ ಎಂದರು.

ಶಿಬಿರವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಪ್ರಭಾರ ಉಪನಿಬಂಧಕಿ ಚಂದ್ರಪ್ರತಿಮಾ ಎಂ.ಜೆ. ಮಾತನಾಡಿ, ಮತದಾರರ ಕರಡು ಪ್ರತಿ ಮತ್ತು ಅಂತಿಮ ಪಟ್ಟಿಯನ್ನು ಸರಿಯಾಗಿ ನಿರ್ವಹಿಸಿದರೆ ಚುನಾವಣೆ ನಡೆಸಲು ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ಹೆಚ್ಚಿನ ಮುತುರ್ಜಿ ವಹಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ನಡೆದ ಸಹಕಾರ ಸಪ್ತಾಹಕ್ಕೆ ಹೆಚ್ಚಿನ ಖರ್ಚು ಆಗಿರುವುದರಿಂದ ಹಣಕಾಸಿ ತೊಂದರೆ ಕಂಡುಬಂದಿದೆ. ಆದುದರಿಂದ ಸಹಕಾರಿ ಸಂಸ್ಥೆಗಳು ದೇಣಿಗೆ ನೀಡುವಂತೆ ಸುತ್ತೋಲೆ ಕಳುಹಿಸಲಾಗಿದೆ. ಬಾಕಿ ಇರುವವರು ಕೂಡಲೇ ದೇಣಿಗೆಯನ್ನು ನೀಡಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಶಶಿಧರ್ ಎಲೆ ಸಹಕಾರ ಸಂಘಗಳ ಚುನಾವಣೆಯನ್ನು ನಡೆಸುವ ವಿಧಿ ವಿಧಾನಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿಯವರ ಕರ್ತವ್ಯ ಮತ್ತು ಜವಾಬ್ದಾರಿಗಳು ಕುರಿತು ಮಾತನಾಡಿದರು.

ಯೂನಿಯನ್ ನಿರ್ದೇಶಕ ಎಂ.ಗೋಪಿಕೃಷ್ಣ ರಾವ್, ಆಡಳಿತ ಮಂಡಳಿಯ ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಹರೀಶ್ ಕಿಣಿ, ಮನೋಜ್ ಎಸ್. ಕರ್ಕೇರ ಉಪಸ್ಥಿತರಿದ್ದರು. ಯೂನಿಯನ್ ಪ್ರಭಾರ ಮುಖ್ಯಕಾರ್ಯನಿರ್ವ ಹಣಾಧಿಕಾರಿ ಪುರುಷೋತ್ತಮ್ ಎಸ್.ಪಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಆದಾಯ ತೆರಿಗೆ ನೋಟೀಸ್ ವಿರುದ್ಧ ಹೋರಾಟ

ಆದಾಯ ತೆರಿಗೆ ಇಲಾಖೆಯಿಂದ ಸಹಕಾರಿ ಸಂಸ್ಥೆಗಳಿಗೆ ಮತ್ತೆ ಎರೆಡೆರಡು ಬಾರಿ ನೋಟೀಸ್ ಜಾರಿ ಮಾಡಲಾಗಿದೆ. ಈ ಹಿಂದೆ ಜಾರಿ ಮಾಡಿದ ನೋಟೀಸ್ ವಿರುದ್ಧ ಕಾನೂನು ಹೋರಾಟ ನಡೆಸಿ ಹೈಕೋರ್ಟ್‌ನಲ್ಲಿ ಜಯ ಸಾಧಿಸಿದ್ದೇವೆ. ಮತ್ತೆ ಇದರ ವಿರುದ್ಧ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ತಿಳಿಸಿದರು.

ಅದೇ ರೀತಿ ಪಡಿತರಕ್ಕೆ ಸಂಬಂಧಿಸಿ ಫಲಾನುಭವಿಗಳ ಹೆಬ್ಬೆರಳಿನ ಗುರುತು ಪಡೆಯುವ ಕಾರ್ಯವನ್ನು ಸಹಕಾರಿ ಸಂಸ್ಥೆಗಳು ನಿರ್ವಹಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಈ ಕಾರ್ಯ ಸಹಕಾರಿ ಸಂಸ್ಥೆಗಳಿಗೆ ಸಾಧ್ಯವಾಗದಿ ರುವುದರಿಂದ ಇದರ ವಿರುದ್ಧವೂ ಹೋರಾಟ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News