ಅನರ್ಹರ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ಜನತೆಗೆ ಸಿಕ್ಕಿದೆ: ಎಚ್.ಡಿ.ದೇವೇಗೌಡ

Update: 2019-12-04 15:46 GMT

ಬೆಂಗಳೂರು, ಡಿ.4: ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ ‘ಅನರ್ಹರ’ ವಿರುದ್ಧ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ. ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆಯನ್ನು ಎತ್ತಿ ಹಿಡಿಯುವ ತೀರ್ಪನ್ನು ಮತದಾರರು ನೀಡಬೇಕು ಎಂದು ಮನವಿ ಮಾಡಿರುವ ಅವರು, ನಾಳೆ ನಡೆಯುವ ಉಪಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವದಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News