ಸಾಂಸ್ಕೃತಿಕ ಸ್ಪರ್ಧೆ: ರಾಜ್ಯಮಟ್ಟಕ್ಕೆ ವಿದ್ಯೋದಯದ ವಿದ್ಯಾರ್ಥಿಗಳು
Update: 2019-12-04 21:35 IST
ಉಡುಪಿ, ಡಿ.4: ಚಿಕ್ಕಮಗಳೂರಿನ ಸೈಂಟ್ ಜೋಸೆಫ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2019-20ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ರಾಜ್ಯಮಟ್ಟದಲ್ಲಿ ಸ್ಪರ್ಧಿಸುವ ಅರ್ಹತೆ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಮೈಥಿಲೀ ಪದವು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲಿಪಿ ಹೆಗ್ಡೆ ಏಕಪಾತ್ರಾಭಿನಯದಲ್ಲಿ ಪ್ರಥಮ ಹಾಗೂ ಶ್ರೇಯಾ ಎಸ್. ರಾವ್ ಭಕ್ತಿಗೀತೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು, ನಾಲ್ವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸುವ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.