ಲೋಕಸಭೆ, ವಿಧಾನಸಭೆಗಳಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ

Update: 2019-12-04 16:12 GMT

ಹೊಸದಿಲ್ಲಿ, ಡಿ. 4: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು 10 ವರ್ಷಗಳಿಗೆ ವಿಸ್ತರಿಸುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಆದರೆ, ಈ ವಿಸ್ತರಣೆಯಿಂದ ಆಂಗ್ಲೋ-ಇಂಡಿಯನ್ ಸಮುದಾಯವನ್ನು ದೂರ ಇರಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಲೋಕಸಭೆ ಹಾಗೂ ವಿಧಾನ ಸಭೆಗಳ ಮೀಸಲಾತಿ 2020 ಜನವರಿ 25ರಂದು ಅಂತ್ಯಗೊಳ್ಳಲಿದೆ.

ಮೀಸಲಾತಿಯನ್ನು 2030 ಜನವರಿ 25ರ ವರೆಗೆ ವಿಸ್ತರಿಸುವ ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಸರಕಾರ ತರಲಿದೆ.

ಈ ಮೀಸಲಾತಿ ವಿಸ್ತರಣೆಯಿಂದ ಆಂಗ್ಲೋ-ಇಂಡಿಯನ್ ಸದಸ್ಯರನ್ನು ಹೊರಗಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮುದಾಯಗಳು ಅಭಿವೃದ್ಧಿ ಹೊಂದಿದ್ದರೆ ಲೋಕಸಭೆ ಹಾಗೂ ವಿಧಾನ ಸಭೆಗಳಲ್ಲಿ ಮೀಸಲಾತಿ ಅಗತ್ಯ ಇಲ್ಲ. ಒಂದು ವೇಳೆ ಅಗತ್ಯವಾದರೆ ಭವಿಷ್ಯದಲ್ಲಿ ಮೀಸಲಾತಿ ಪರಿಗಣಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಆಂಗ್ಲೋ-ಇಂಡಿಯನ್ ಸಮುದಾಯಕ್ಕೆ ಮೀಸಲಾತಿ ಮುಂದುವರಿಸುವಿರೇ ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಒಮ್ಮೆ ಮಸೂದೆ ಮಂಡಿಸಿದ ಬಳಿಕ, ವಿವರಗಳು ತಿಳಿಯುತ್ತವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News