ಉನ್ನಾವೊ: ನ್ಯಾಯಾಲಯಕ್ಕೆ ತೆರಳುತ್ತಿದ್ದ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನ

Update: 2019-12-05 07:16 GMT

ಲಕ್ನೋ, ಡಿ.5: ಉತ್ತರ ಪ್ರದೇಶದ ಉನ್ನಾವೊದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ  23ರ ಹರೆಯದ ಯುವತಿ ಸ್ಥಳೀಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಗುರುವಾರ  ಆಗಮಿಸುತ್ತಿದ್ದಾಗ ಆಕೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ.

ಬೆಂಕಿಯಿಂದಾಗಿ ಯುವತಿಗೆ ಶೇ 70ರಷ್ಟು ಸುಟ್ಟಗಾಯವಾಗಿದ್ದು,  ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಲಕ್ನೋದ ವಿಶೇಷ ಆಸ್ಪತ್ರೆಗೆ ಸಾಗಿಸಲಾಗಿದೆ.

ಯುವತಿಗೆ ಬೆಂಕಿ ಹಚ್ಚಿರುವ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ  ಪೈಕಿ ಒಬ್ಬಾತ ಅತ್ಯಾಚಾರ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮಾರ್ಚ್ ನಲ್ಲಿ  ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ  ಯುವತಿ ಇಬ್ಬರ ವಿರುದ್ಧ  ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ  ಯುವತಿ ನ್ಯಾಯಾಲಯಕ್ಕೆ ಹಾಜರಾಗಲು ಬರುತ್ತಿದ್ದಾಗ ಆಕೆಯನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಗೆ ಬೆಂಕಿ ಹಚ್ಚಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News