ಜಾಗತಿಕ ತಾಪಮಾನ ಏರಿಕೆ ಬಗ್ಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್

Update: 2019-12-05 07:59 GMT

ಮಂಗಳೂರು, ಡಿ.5: ಪರಿಸರ ಮಾಲಿನ್ಯ ಜಾಗತಿಕ ತಾಪಮಾನ ಏರಿಕೆಗೆ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಕರಾವಳಿಯಲ್ಲೂ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಮಾಲಿನ್ಯ ನಿಯಂತ್ರಿಸಲು ಎಲ್ಲರೂ ಸಕ್ರಿಯ ಪಾತ್ರ ವಹಿಸಬೇಕಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ಲಯನ್ಸ್ ಕ್ಲಬ್ ವೆಲೆನ್ಸಿಯಾ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಯೋಗದಿಂದಿಗೆ ಹಮ್ಮಿಕೊಂಡಿದ್ದ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜಾಗತಿಕ ತಾಪಮಾನದ ಹೆಚ್ಚಳದಿಂದ ಸಮುದ್ರದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಈ ರೀತಿ ತಾಪಮಾನ ಏರಿಕೆಗೆ ಕಾರಣವಾಗುತ್ತಿರುವ ಪರಿಸರ ಮಾಲಿನ್ಯದ ಸಮಸ್ಯೆಗಳ ಬಗ್ಗೆ, ಹಸಿರು ಪರಿಸರ ಅಗತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ 317 ಡಿ ಜಿಲ್ಲಾ ರಾಜ್ಯಪಾಲ ರೊನಾಲ್ಡ್ ಗೋಮ್ಸ್, ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿ ಜಯಪ್ರಕಾಶ್ ನಾಯ್ಕ್ ಭಾಗವಹಿಸಿದ್ದರು.

ವೆಲೆನ್ಸಿಯಾ ಲಯನ್ಸ್ ಘಟಕದ ಅಧ್ಯಕ್ಷ ಲೆಸ್ಲಿ ಡಿಸೋಜ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಲಯನ್ಸ್ ಕಾರ್ಯದರ್ಶಿ ಓಸ್ವಾಲ್ಡ್ ಡಿಕುನ್ಹಾ, ಖಜಾಂಚಿ ಲಾರೆನ್ಸ್ ಸೆರಾವೊ ಮತ್ತಿತರರು ಉಪಸ್ಥಿತರಿದ್ದರು. ಶ್ಯಾಮ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸ್ಥಳೀಯ ಬದ್ರಿಯಾ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News