ಡಿ.7: ಪುತ್ತೂರು ವಿವೇಕಾನಂದ ಲಾ ಕಾಲೇಜಿನಲ್ಲಿ ಪೊಕ್ಸೊ ಕುರಿತು ಕಾರ್ಯಾಗಾರ

Update: 2019-12-05 08:43 GMT

ಪುತ್ತೂರು, ಡಿ.5: ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012(ಪೊಕ್ಸೊ) ಕುರಿತ ಒಂದು ದಿನದ ಮಾಹಿತಿ ಕಾರ್ಯಾಗಾರವು ಡಿ.7ರಂದು ವಿವೇಕಾನಂದ ಕಾನೂನು ಕಾಲೇಜಿನ ಸಭಾ

ಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ಕಾಲೇಜಿನ ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ.ಕೆ.ರವೀಂದ್ರ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಅಭಿಯೋಗ ಮತ್ತು ಸರಕಾರಿ ವ್ಯಾಜಗಳ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪುತ್ತೂರು ವಕೀಲರ ಸಂಘ ಹಾಗೂ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಯೋಗದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಕಾರ್ಯಾಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಪೂರ್ವಾಹ್ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡಲೂರು ಸತ್ಯನಾರಾಯಣ ಆಚಾರ್ಯ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾನೂನು ಇಲಾಖೆಯ ವಿಶೇಷ ಕಾರ್ಯದರ್ಶಿ ಎಚ್.ಕೆ.ಜಗದೀಶ್, ಕಾನೂನು ವಿ.ವಿ.ಯ ಉಪಕುಲಪತಿ ಡಾ.ಪಿ.ಈಶ್ವರ್ ಭಟ್, ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರ, ಪುತ್ತೂರು ಪ್ರಭಾರ ಸಹಾಯಕ ಕಮಿಶನರ್ ಅನಂತ ಶಂಕರ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯ ಇಲಾಖೆಯ ಉಪನಿರ್ದೇಶಕ ಕೆ.ಶಿವ ಪ್ರಸಾದ್ ಆಳ್ವ, ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಂಜುನಾಥ್, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಉದ್ಘಾಟನಾ ಸಮಾರಂಭದ ಬಳಿಕ ಪೊಕ್ಸೊ ಕಾಯ್ದೆಯ ಕುರಿತು ವಿವಿಧ ವಿಷಯಗಳ ಮಾಹಿತಿ ಕಾರ್ಯಕ್ರಮ ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ಕಾನೂನು ಇಲಾಖೆಯ ಕಾರ್ಯದರ್ಶಿ ಎ.ವಿ.ಪ್ರಸಾದ್, ಉಪ ನಿರ್ದೇಶಕ ಕೆ. ಶಿವಪ್ರಸಾದ್ ಆಳ್ವ, ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ್, ಜಿಲ್ಲಾ ಸರಕಾರಿ ಅಭಿಯೋಜಕ ಉದಯಾನಂದ ಕೆ., ಪೊಕ್ಸೊ ನ್ಯಾಯಾಲಯದ ಪ್ರಧಾನ ಅಭಿಯೋಜಕ ಪುಷ್ಪರಾಜ್ ಅಡ್ಯಂತಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಭಾರತಿ ಪಾಲ್ಗೊಳ್ಳಲಿದ್ದಾರೆ. ಮಾಹಿತಿ ಕಾರ್ಯಕ್ರಮದ ಬಳಿಕ ಅರೆಕಾಲಿಕ ಸ್ವಯಂಸೇವಕ ಯೋಗೀಶ್ ಮಲ್ಲಿಗೆಮಾಡು ‘ಪೊಕ್ಸೊ ಅಧಿನಿಯಮದ ಪರಿಣಾಮಕಾರಿ ಅನುಷ್ಠಾನದ ಸವಾಲು ಮತ್ತು ಪರಿಹಾರಗಳ’ ಕುರಿತು ಮಾತನಾಡಲಿದ್ದಾರೆ.

ಅಪರಾಹ್ನದ ಬಳಿಕ ಸಂವಾದ ಮತ್ತು ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಜೋಶಿ, ಸದಸ್ಯ ಯಶೋದರ್ ಜೈನ್, ಉಪನ್ಯಾಸಕ ಪ್ರೊ.ಕುಮಾರ್ ಎಸ್., ಪ್ರಾಂಶುಪಾಲೆ ಅಕ್ಷತಾ ವಿ.ಪಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News