ಉಪಚುನಾವಣೆ: ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Update: 2019-12-05 15:05 GMT

ಬೆಂಗಳೂರು, ಡಿ.5: ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ಭೋವಿಪಾಳ್ಯ ಮತಗಟ್ಟೆ ಬಳಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಮತಗಟ್ಟೆ ಹೊರಗಡೆ ನಿಂತ ಮೂರೂ ಪಕ್ಷದ ಕಾರ್ಯಕರ್ತರು ತಮ್ಮ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಜನರನ್ನು ಒತ್ತಾಯಿಸುತ್ತಿದ್ದರು. ಈ ವೇಳೆ ಅನರ್ಹರಿಗೆ ಮತ ನೀಡಬೇಡಿ, ನಿಮ್ಮ ಮತ ನಮಗೆ ಹಾಕಿ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ. ಇದೇ ಹಣ ವೇಳೆ ಹಂಚಿಕೆ ವಿಚಾರದಲ್ಲೂ ಮೂರೂ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶ ಮಾಡಿದ್ದಾರೆ. ಪೊಲೀಸರು, ನೀವು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ ಕೇಳಿ, ಅನರ್ಹ ಎಂಬ ಪದವನ್ನು ಪ್ರಸ್ತಾಪಿಸಬೇಡಿ ಎಂದು ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಅವರನ್ನು ಅನರ್ಹರೆಂದು ಹೇಳಿದೆ, ಹಾಗಾಗಿ ನಾವು ಅನರ್ಹರೆಂದೇ ಕರೆಯುತ್ತೇವೆ ಎಂದಿದ್ದಾರೆ. ಇದರಿಂದ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News