ಮೂಡುಬಿದಿರೆ : ಖಾಸಗಿ ಬಸ್ ಪಲ್ಟಿ; 18 ಮಂದಿಗೆ ಗಾಯ

Update: 2019-12-05 15:50 GMT

ಮೂಡುಬಿದಿರೆ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ಆಲಂಗಾರು ಸಮೀಪ ನಡೆದಿದ್ದು, ಘಟನೆಯಿಂದ 18 ಮಂದಿ ಗಾಯಗೊಂಡಿದ್ದಾರೆ.

ಕೊಲ್ಲೂರಿನಿಂದ ಮಂಗಳೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬಸ್ ಆಲಂಗಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿದ್ದು, ಈ ಸಂದರ್ಭ ಮೂಡುಬಿದಿರೆ ಗಾಂಧಿನಗರದ ಸುಮಾ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News