ಹೆಬ್ರಿ: 8ಕ್ಕೆ ಮಿನಿ ವಿಧಾನಸೌಧಕ್ಕೆ ಶಿಲಾನ್ಯಾಸ
ಉಡುಪಿ, ಡಿ.5: ಉಡುಪಿ ಜಿಲ್ಲಾಡಳಿತದ ವತಿಯಿಂದ ಹೆಬ್ರಿ ತಾಲೂಕಿನ ಮಿನಿ ವಿಧಾನಸೌಧ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಡಿ. 8ರಂದು ಬೆಳಗ್ಗೆ 11 ಗಂಟೆಗೆ ಹೆಬ್ರಿ ಮಿನಿ ವಿಧಾನಸೌಧ ನೂತನ ಕಚೇರಿ ಕಟ್ಟಡ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಗೃಹ ಮತ್ತು ಸಹಕಾರ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕಂದಾಯ ಸಚಿವ ಆರ್. ಅಶೋಕ್ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೆಬ್ರಿ ತಾಲೂಕು ತಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಹೆಬ್ರಿ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.