ಕಾರ್ಮಿಕ ಬಂಧು ಸ್ವಯಂ ಸೇವಕ ಹುದ್ದೆಗೆ ಅರ್ಜಿ ಆಹ್ವಾನ

Update: 2019-12-05 16:24 GMT

ಉಡುಪಿ, ಡಿ.5: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ದ್ರತಾ ಮಂಡಳಿಗಳ ಯೋಜನೆ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಒಂದೇ ಸೂರಿನಡಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಎಂಬ ಯೋಜನೆಯನ್ನು ರೂಪಿಸಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕಾರ್ಮಿಕ ಬಂಧುಗಳು ನಗರ/ಗ್ರಾಮೀಣ ಪ್ರದೇಶದ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಏಕವ್ಯಕ್ತಿ ಸಂಸ್ಥೆಯಂತೆ ಸ್ದಯಂಸೇವಕರಾಗಿ ಕಮೀಷನ್ ಆಧಾರದ ಮೇಲೆ ಕಾರ್ಯನಿರ್ವಹಿಸಲಿದ್ದು, ಇವರು ಕಾರ್ಮಿಕರನ್ನು ಸಶಕ್ತರನ್ನಾಗಿ ಮಾಡಿ ಅವರ ಉನ್ನತೀಕರಣಕ್ಕಾಗಿ ಕೆಲಸ ಮಾಡಲಿದ್ದಾರೆ. ಪ್ರತಿಯೊಂದು ಗ್ರಾಪಂಗೆ ಒಬ್ಬರನ್ನು ನೇಮಕ ಮಾಡಲಾಗುತ್ತದೆ.

ಈ ಯೋಜನೆಗೆ ಕನಿಷ್ಟ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋ ಮಿತಿಯನ್ನು ಹೊಂದಿರಬೇಕು. ಅಂಗೀಕೃತ ಶೈಕ್ಷಣಿಕ ಸಂಸ್ಥೆ/ಮಂಡಳಿಯಿಂದ ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. ಕಾರ್ಮಿಕ ಬಂಧುವಾಗಿ ಆಯ್ಕೆಯಾಗುವ ಅ್ಯರ್ಥಿಗಳು ಗ್ರಾಮ/ಪಟ್ಟಣದ ವ್ಯಾಪ್ತಿಯಲ್ಲಿ ನೆಲೆಸಿರಬೇಕು. ಕನಿಷ್ಠ ಕಂಪೂ್ಯಟರ್ ಜ್ಞಾನವನ್ನು ಹೊಂದಿರಬೇಕು.

ಅರ್ಹ ಹಾಗೂ ಆಸಕ್ತಿಯುಳ್ಳ ಅ್ಯರ್ಥಿಗಳು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಡಿ.16 ರೊಳಗೆ ಕಾರ್ಮಿಕ ಅಧಿಕಾರಿಗಳ ಕಚೇರಿ, ಕಾರ್ಮಿಕ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿಗೆ ಅರ್ಜಿ ಸಲ್ಲಿಸಬೇಕು ಎಂದು ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News