ಕಾಲೇಜಿನಲ್ಲಿ ಮಿತಿಗಿಂತ ಹೆಚ್ಚಿನ ಅಭ್ಯರ್ಥಿಗಳಿಗೆ ಪ್ರವೇಶ: ಭಾರತೀಯ ವಕೀಲರ ಪರಿಷತ್‌ಗೆ ಹೈಕೋರ್ಟ್ ನೋಟಿಸ್

Update: 2019-12-05 18:13 GMT

ಬೆಂಗಳೂರು, ಡಿ.5: ರಾಜ್ಯದ 24 ಕಾನೂನು ಕಾಲೇಜುಗಳಲ್ಲಿ ನಿಗದಿತ ಪ್ರವೇಶ ಮಿತಿಗಿಂತ ಹೆಚ್ಚಿನ ಅಭ್ಯರ್ಥಿಗಳಿಗೆ ಪ್ರವೇಶ ಮಾಡಿಕೊಳ್ಳಲಾಗುತ್ತಿದೆ ಎಂದು ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕರ್ನಾಟಕ ಕಾನೂನು ವಿವಿ, ಭಾರತೀಯ ವಕೀಲರ ಪರಿಷತ್ ಹಾಗೂ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಈ ಕುರಿತು ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಬಿ.ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಿರುವ ಎಲ್ಲರಿಗೂ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಕಾನೂನು ವಿವಿ ವ್ಯಾಪ್ತಿಗೆ ಬರುವ ರಾಜ್ಯದ 24 ಕಾನೂನು ಕಾಲೇಜುಗಳಲ್ಲಿ 2014ರಿಂದ 2018ರವರೆಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರವೇಶ ನೀಡಲಾಗಿದೆ. ಇಂತಹ ತಪ್ಪನ್ನು ಕಾನೂನು ವಿವಿ ಹಾಗೂ ಭಾರತೀಯ ವಕೀಲರ ಪರಿಷತ್ ಮಾಡಿದೆ. ಇಂತಹ ನಿರ್ಧಾರಗಳಿಂದ ಕಾನೂನು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಉಂಟಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News