ಸ್ಕೇಟಿಂಗ್ ಸ್ಪರ್ಧೆ : ಮುಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2019-12-06 13:51 GMT

ಮಂಗಳೂರು, ಡಿ.6: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್ ಇತ್ತೀಚೆಗೆ ಮೈಸೂರಿನಲ್ಲಿ ಆಯೋಜಿಸಿದ್ದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ನಗರದ ಮುಹಮ್ಮದ್ ಶಾಮಿಲ್ ಅರ್ಷದ್ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮೈಸೂರಿನಲ್ಲಿ ನಡೆದ 35ನೆ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮುಹಮ್ದಮ್ ಶಾಮಿಲ್ ಅರ್ಷದ್ ರೋಡ್‌ರೇಸ್ ಒನ್‌ಲ್ಯಾಪ್‌ನಲ್ಲಿ ಚಿನ್ನದ ಪದಕ, ರೋಡ್‌ರೇಸ್ 100 ಮೀ.ನಲ್ಲಿ ಬೆಳ್ಳಿ, ರಿಂಕ್ 500 ಪ್ಲಸ್ ಡಿಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಡಿಸೆಂಬರ್‌ನಲ್ಲಿ ವಿಶಾಖಪಟ್ಟಣದಲ್ಲಿ ನಡೆಯು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಅರ್ಷದ್ ಪಾಲ್ಗೊಳ್ಳಲಿದ್ದಾರೆ.

ನಗರದ ಜೆಪ್ಪಿನಮೊಗರಿನ ಯೆನೆಪೊಯ ಶಾಲೆಯ ವಿದ್ಯಾರ್ಥಿಯಾಗಿರುವ ಅರ್ಷದ್ ನಗರದ ಅರ್ಷದ್ ಹುಸೈನ್-ರಮ್ಲತ್ ಅರ್ಷದ್ ದಂಪತಿಯ ಪುತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News