'ಎನ್‌ಕೌಂಟರ್' ಬಗ್ಗೆ ಅಶ್ವಥ್ ನಾರಾಯಣ, ಸಿ.ಟಿ.ರವಿ ಹೇಳಿದ್ದು ಹೀಗೆ...

Update: 2019-12-06 14:01 GMT

ಬೆಂಗಳೂರು, ಡಿ.6: ಹೈದರಾಬಾದ್ ಪಶು ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿರುವುದು ಶ್ಲಾಘನೀಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನರ ಅಪೇಕ್ಷೆಯಂತೆ ಪೊಲೀಸರು ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ್ದಾರೆ. ಇಂತಹ ಕೃತ್ಯವನ್ನು ಎಸಗುವವರಿಗೆ ಇದು ಎಚ್ಚರಿಕೆ ಆಗಲಿದೆ ಎಂದು ತಿಳಿಸಿದರು.

ಅತ್ಯಾಚಾರಿಗಳಿಗೆ ಶೀಘ್ರ ಹಾಗೂ ಕಠಿಣ ಶಿಕ್ಷೆ ನೀಡುವಂತಹ ಕಾನೂನು ಅಗತ್ಯವಿದೆ. ಯಾವುದೇ ಕಾರಣಕ್ಕೂ ಅತ್ಯಾಚಾರಿಗಳನ್ನು, ದುಷ್ಟರನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಅವರಿಗೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಮಾತನಾಡಿ, ಅತ್ಯಾಚಾರಿಗಳಿಗೆ ಮರಣ ದಂಡನೆ ನೀಡುವಂತಹ ಕಾನೂನು ನಮ್ಮಲ್ಲಿ ಇದೆ. ಆದರೆ, ಹೈದರಾಬಾದ್ ಪಶುವೈದ್ಯೆಯ ಮೇಲೆ ಅತ್ಯಾಚಾರಿಗಳನ್ನು ಪೊಲೀಸರು ಎನ್‌ಕೌಂಟರ್ ಮಾಡುವ ಮೂಲಕ ಒಳ್ಳೆಯ ಸಂದೇಶ ನೀಡಿದ್ದಾರೆಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News