ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ

Update: 2019-12-06 17:03 GMT

ಬೆಂಗಳೂರು, ಡಿ.6: ರಾಜ್ಯದ ಸರಕಾರಿ ಸಂಸ್ಥೆಗಳ ಪೈಕಿ ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಪ್ರಶಸ್ತಿಯು ಕೆಎಸ್‌ಆರ್‌ಟಿಸಿಗೆ ಲಭಿಸಿದೆ. ಸತತ ಐದನೇ ಬಾರಿ ನಿಗಮವು ಈ ಪ್ರಶಸ್ತಿಯನ್ನು ಪಡೆಯುತ್ತಿದೆ.

ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಪ್ರಶಸ್ತಿಯನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ನಿವೃತ್ತ ಏರ್‌ವೈಸ್ ಮಾರ್ಷಲ್ ಬಿ.ಕೆ.ಮುರಳಿ, ನಿವೃತ್ತ ಬ್ರಿಗೇಡಿಯರ್ ರವಿ ಮುನಿಸ್ವಾಮಿ, ಲೆಫ್ಟಿನೆಂಟ್ ಜನರಲ್ ಮನೋಜ್ ಯಾದವ್ ಸೇರಿದಂತೆ ಇನ್ನಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News