ಎನ್ ಕೌಂಟರ್ ನಡೆಸಿದ ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸಲು ಸುಪ್ರೀಂ ಕೋರ್ಟ್ ಗೆ ಅರ್ಜಿ

Update: 2019-12-07 18:29 GMT

ಹೊಸದಿಲ್ಲಿ, ಡಿ. 7: ತೆಲಂಗಾಣದಲ್ಲಿ ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆ ಆರೋಪಿಗಳ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿರುವ ಪೊಲೀಸ್ ಸಿಬ್ಬಂದಿ ವಿರುದ್ಧ ತನಿಖೆ ನಡೆಸುವಂತೆ ಹಾಗೂ ಎಫ್‌ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ ಅರ್ಜಿ ಸಲ್ಲಿಸಲಾಗಿದೆ.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ 2014ರ ಮಾರ್ಗಸೂಚಿ ಅನುಸರಿಸಿಲ್ಲ ಎಂದು ಆರೋಪಿಸಿ ನ್ಯಾಯವಾದಿಗಳಾದ ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ.

ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ಯುತ್ತಿರುವಾಗ ಪರಾರಿಯಾಗಲು ಯತ್ನಿಸಿದ ಸಂದರ್ಭ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಆರೋಪಿಗಳು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದರು.

ಶಂಶದಾಬಾದ್ ಪ್ರದೇಶದಲ್ಲಿ ನವೆಂಬರ್ 27ರಂದು ತೆಲಂಗಾಣದ ಪಶುವೈದ್ಯೆಯ ಮೇಲೆ ನಾಲ್ವರು ಅತ್ಯಾಚಾರ ನಡೆಸಿದ್ದರು ಹಾಗೂ ಬೆಂಕಿ ಹಚ್ಚಿ ಹತ್ಯೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News