ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಸಾವಿಗೆ ಆದಿತ್ಯನಾಥ್ ಸರ್ಕಾರವೇ ಹೊಣೆ : ಪ್ರಿಯಾಂಕಾ ಗಾಂಧಿ ಆರೋಪ

Update: 2019-12-07 09:55 GMT

ಹೊಸದಿಲ್ಲಿ, ಡಿ.7: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಸಾವಿನ ನಂತರ ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆ ಕುರಿತು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ  ಅವರು ಉತ್ತರಪ್ರದೇಶದ ಆದಿತ್ಯನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು  ಅತ್ಯಾಚಾರ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ  ಹೇಳಿದರು.  

"ದು:ಖದಲ್ಲಿರುವ  ಉನ್ನಾವೊ ಸಂತ್ರಸ್ತೆಯ ಕುಟುಂಬಕ್ಕೆ ಧೈರ್ಯ ನೀಡಬೇಕೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಪ್ರಿಯಾಂಕಾ ಗಾಂಧಿ ಶನಿವಾರ ಟ್ವೀಟ್  ಮಾಡಿದ್ದಾರೆ

ಕಾನೂನು ಮತ್ತು ಸುವ್ಯವಸ್ಥೆ ಕುರಿತು ರಾಜ್ಯ ಸರ್ಕಾರವನ್ನು ಟೀಕಿಸಿದ ಅವರು: " ಸಂತ್ರಸ್ತೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ ಎಂಬುದು ನಮ್ಮೆಲ್ಲರ ವೈಫಲ್ಯ. ಸಾಮಾಜಿಕವಾಗಿ, ನಾವೆಲ್ಲರೂ ತಪ್ಪಿತಸ್ಥರು, ಆದರೆ ಇದು ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಸಹ ತೋರಿಸುತ್ತದೆ . " ಎಂದು ಹೇಳಿದರು.

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಏಕೆ ಹೆಚ್ಚುತ್ತಿದೆ ಎಂದು ಪ್ರಿಯಾಂಕಾ ಪ್ರಶ್ನಿಸಿದರು ಮತ್ತು ಹಿಂದಿನ ಉನ್ನಾವೊದಲ್ಲಿ ನಡೆದ ಘಟನೆಯನ್ನು ಗಮನಿಸಿದರೆ, ಸಂತ್ರಸ್ತೆಗೆ ಏಕೆ ರಕ್ಷಣೆ ನೀಡಲಿಲ್ಲ.

"ಹಿಂದಿನ ಉನ್ನಾವೊ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಸಂತ್ರಸ್ತೆಗೆ ಸರ್ಕಾರ ಏಕೆ ತಕ್ಷಣದ ರಕ್ಷಣೆ ನೀಡಲಿಲ್ಲ? ಎಫ್ಐಆರ್ ನೋಂದಾಯಿಸಲು ನಿರಾಕರಿಸಿದ ಅಧಿಕಾರಿಯ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ?  ಎಂದು ಪ್ರಶ್ನಿಸಿದರು.

"ಉತ್ತರಪ್ರದೇಶದಲ್ಲಿ ಪ್ರತಿದಿನ ಮಹಿಳೆಯರ ವಿರುದ್ಧ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ, ಈ ಬಗ್ಗೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತಿದೆ ? ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News