ಎಲಿವೇಟೆಡ್ ಕಾರಿಡಾರ್ ಕಾಮಗಾರಿ ವೇಳೆ ಅವಘಡ: ಬೈಕ್ ಸವಾರನಿಗೆ ಗಂಭೀರ ಗಾಯ

Update: 2019-12-07 15:35 GMT

ಬೆಂಗಳೂರು, ಡಿ.7: ಎಲಿವೇಟೆಡ್ ಕಾರಿಡಾರ್ ಕಾಮಗಾರಿ ವೇಳೆ ಬೇರಿಂಗ್ ಬಿದ್ದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಜರುಗಿದೆ.

ಇಲ್ಲಿನ ಕೋರಮಂಗಲದ ಸೋನಿವರ್ಲ್ಡ್ ಸಿಗ್ನಲ್ ಬಳಿ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ನಡೆಯುತ್ತಿದ್ದು, ಇದೇ ಮಾರ್ಗವಾಗಿ ಸಾಗುತ್ತಿದ್ದ ಬೈಕ್ ಸವಾರ ಲಾರೆನ್ಸ್(44) ಎಂಬುವರ ಮೇಲೆ ಬೇರಿಂಗ್ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳದಲ್ಲೇ ಕುಸಿದು ಬಿದ್ದ ಲಾರೆನ್ಸ್ ಅವರನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷದಿಂದಲೇ ಈ ಅವಘಡ ಸಂಭವಿಸಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News