ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್

Update: 2019-12-07 18:11 GMT

ಬೆಂಗಳೂರು, ಡಿ.7: ಉಪ ಚುನಾವಣೆ ಹಿನ್ನೆಲೆ ಸೋಮವಾರ(ಡಿ.9) ಮತ ಎಣಿಕೆ ಪ್ರಕ್ರಿಯೆ ನಡೆಯುವ ಕೇಂದ್ರದ ವ್ಯಾಪ್ತಿಯಲ್ಲಿ ಹಾಗೂ ನಗರದ ಹಲವು ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪುರಂ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಪ್ರತಿ ಮತ ಎಣಿಕೆ ಕೇಂದ್ರದ ಬಳಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ನೀಡಲಾಗುತ್ತದೆ. ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಕಡ್ಡಾಯವಾಗಿ ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗಿದೆ ಎಂದು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News