ದಿಲ್ಲಿಯಲ್ಲಿ ಅಗ್ನಿ ದುರಂತ: 35 ಮಂದಿ ಸಾವು

Update: 2019-12-08 04:26 GMT
ಫೋಟೋ: NDTV

ಹೊಸದಿಲ್ಲಿ, ಡಿ.8: ರಾಣಿ ಝಾನ್ಸಿ ರಸ್ತೆಯ ಅನಾಜ್ ಮಂಡಿಯಲ್ಲಿ ಆರು ಅಂತಸ್ತಿನ ಕಟ್ಟಡದಲ್ಲಿರುವ ಕಾರ್ಖಾನೆಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ದುರಂತದಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ.

ಬಹುಮಹಡಿ ಕಟ್ಟಡದಲ್ಲಿ ಕಾರ್ಮಿಕರು ನಿದ್ದೆ ಮಾಡುತ್ತಿರುವ ಸಮಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 5.22 ಕ್ಕೆ ಬೆಂಕಿ ದುರಂತದ ಬಗ್ಗೆ ಕರೆ ಬಂದಿದ್ದು, 30 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಟ್ಟಡದಲ್ಲಿ ಸಿಲುಕಿದ್ದ  56 ಜನರನ್ನು ರಕ್ಷಿಸಲಾಗಿದೆ ಮತ್ತು ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಹಿಂದೂ ರಾವ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News