ದಿಲ್ಲಿ ಅಗ್ನಿ ದುರಂತ: ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

Update: 2019-12-08 08:05 GMT

ಹೊಸದಿಲ್ಲಿ, ಡಿ.8:  ರಾಣಿ ಝಾನ್ಸಿ ರಸ್ತೆಯ ಅನಾಜ್ ಮಂಡಿಯ ಆರು ಅಂತಸ್ತಿನ ಕಾರ್ಖಾನೆಯಲ್ಲಿ ರವಿವಾರ ಬೆಳಗ್ಗಿನ  ಜಾವ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯ ಮಂತ್ರಿ  ಅರವಿಂದ್ ಕೇಜ್ರಿವಾಲ್ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ.

ಈ ದುರ್ಘಟನೆಯಲ್ಲಿ ಕನಿಷ್ಠ 43 ಮಂದಿ ಮೃತಪಟ್ಟಿದ್ದಾರೆ .

ದುರಂತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು  ಆರ್‌ಎಂಎಲ್ ಆಸ್ಪತ್ರೆ, ಲೇಡಿ ಹಾರ್ಡಿಂಗ್ ಆಸ್ಪತ್ರೆ ಮತ್ತು ಹಿಂದೂ ರಾವ್ ಆಸ್ಪತ್ರೆಗೆ  ದಾಖಲಿಸಲಾಗಿದೆ.  ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಭೇಟಿಯಾದರು.

ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಸಿಎಂ ಕೇಜ್ರಿವಾಲ್ ಅವರು ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News