ದಿಲ್ಲಿ: ಭೀಕರ ಅಗ್ನಿದುರಂತ

Update: 2019-12-08 18:23 GMT

ದಿಲ್ಲಿಯ ಜನನಿಬಿಡ ಪ್ರದೇಶವಾದ ರಾಣಿ ಝಾನ್ಸಿ ರಸ್ತೆಯ ಅನಾಜ್ ಮಂಡಿಯಲ್ಲಿನ ಲಗೇಜ್ ತಯಾರಿಕೆ ಫ್ಯಾಕ್ಟರಿಯಲ್ಲಿ ರವಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ 43 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಚ್ಚಿನವರು ಕಾರ್ಮಿಕರಾಗಿದ್ದು ಮಲಗಿದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮೃತರ ಕುಟುಂಬಗಳಿಗೆ ತಲಾ 10 ಲ.ರೂ. ಮತ್ತು ಗಾಯಾಳುಗಳಿಗೆ ತಲಾ ಒಂದು ಲ.ರೂ.ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಶೋಕವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿರುವ ದಿಲ್ಲಿ ಸರಕಾರವು ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor