ನಿರ್ಭಯ ಅತ್ಯಾಚಾರ, ಹತ್ಯೆ ಪ್ರಕರಣ: ಸುಪ್ರೀಂಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ದೋಷಿ

Update: 2019-12-09 17:56 GMT

ಹೊಸದಿಲ್ಲಿ, ಡಿ. 5: ದಿಲ್ಲಿಯ ನಿರ್ಭಯ ಅತ್ಯಾಚಾರ, ಹತ್ಯೆ ಪ್ರಕರಣದ ಓರ್ವ ಅಪರಾಧಿ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿರುವುದರಿಂದ ಈ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ವಿಧಿಸಲಾದ ಮರಣ ದಂಡನೆ ಬಗ್ಗೆ ಅನುಮಾನದ ಕಾರ್ಮೋಡ ಕವಿದಿದೆ.
ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಗೃಹ ಸಚಿವಾಲಯ ಶಿಫಾರಸು ಮಾಡಿದ ಕೆಲವು ದಿನಗಳ ಬಳಿಕ ಅಕ್ಷಯ್ ಠಾಕೂರ್ ಈ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾನೆ.

ವಿನಯ್ ಕುಮಾರ್, ಮುಖೇಶ್ ಸಿಂಗ್ ಹಾಗೂ ಪವನ್ ಗುಪ್ತಾ ಸಲ್ಲಿಸಿದ್ದ ಇದೇ ರೀತಿಯ ಮನವಿಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಿರಸ್ಕರಿಸಿದೆ. ಅಕ್ಷಯ್ ಠಾಕೂರ್‌ನ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದರೆ, ರಾಷ್ಟ್ರಪತಿಯ ವರಿಗೆ ಕ್ಷಮಾಧಾನದ ಅರ್ಜಿ ಸಲ್ಲಿಸುವ ಅವಕಾಶ ಆತನಿಗೆ ಇದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News