ಹ್ಯಾಟ್ರಿಕ್ ಚಿನ್ನ ಜಯಿಸಿದ ಭಾರತದ ಮಹಿಳಾ ಫುಟ್ಬಾಲ್ ತಂಡ

Update: 2019-12-10 07:08 GMT

ಪೊಖಾರ(ನೇಪಾಳ), ಡಿ.9: ಆತಿಥೇಯ ನೇಪಾಳ ತಂಡವನ್ನು ಫೈನಲ್‌ನಲ್ಲಿ 2-0 ಅಂತರದಿಂದ ಮಣಿಸಿದ ಭಾರತೀಯ ಮಹಿಳಾ ಫುಟ್ಬಾಲ್ ತಂಡ ದಕ್ಷಿಣ ಏಶ್ಯನ್ ಗೇಮ್ಸ್‌ನಲ್ಲಿ ಸತತ ಮೂರನೇ ಚಿನ್ನದ ಪದಕ ತನ್ನದಾಗಿಸಿಕೊಂಡಿದೆ. ಮೊದಲಾರ್ಧದಲ್ಲಿ ಅವಳಿ ಗೋಲು ಗಳಿಸಿದ ಬಾಲಾದೇವಿ ಮತ್ತೊಮ್ಮೆ ಸ್ಟಾರ್ ಆಟಗಾರ್ತಿಯಾಗಿ ಹೊರಹೊಮ್ಮಿದರು. ಆತಿಥೇಯ ನೇಪಾಳ ವಿರುದ್ಧ 2-0 ಅಂತರದ ಗೆಲುವಿಗೆ ನೆರವಾದರು. 29ರ ಹರೆಯದ ಬಾಲಾದೇವಿ ಟೂರ್ನಮೆಂಟ್‌ನಲ್ಲಿ ಅಗ್ರ ಗೋಲ್‌ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. 4 ಪಂದ್ಯಗಳಲ್ಲಿ 5 ಗೋಲುಗಳನ್ನು ಗಳಿಸಿದ್ದಾರೆ. ಐದು ಪಂದ್ಯಗಳಲ್ಲಿ ಒಂದೂ ಗೋಲು ಬಿಟ್ಟುಕೊಡದ ಭಾರತದ ಗೋಲ್‌ಕೀಪರ್ ಅದಿತಿ ಚೌಹಾಣ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. 18ನೇ ನಿಮಿಷದಲ್ಲಿ ಗೋಲು ಗಳಿಸಿದ ಸ್ಟಾರ್ ಸ್ಟ್ರೈಕರ್ ಬಾಲಾದೇವಿ ಭಾರತಕ್ಕೆ ಮುನ್ನಡೆ ಒದಗಿಸಿಕೊಟ್ಟರು. 56ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸಿದ ಬಾಲಾದೇವಿ ಟೂರ್ನಮೆಂಟ್‌ನಲ್ಲಿ ಅಗ್ರ ಸ್ಕೋರರ್ ಎನಿಸಿಕೊಂಡರು. ಭಾರತ ಕೊನೆಯ ತನಕ 2-0 ಮುನ್ನಡೆ ಕಾಯ್ದುಕೊಂಡಿತು. ನೇಪಾಳದ ಆಟಗಾರ್ತಿಯರು ಅವಕಾಶ ಸೃಷ್ಟಿಸಿಕೊಳ್ಳಲು ವಿಫಲರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News