ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾದ ನೂತನ ಶಾಸಕರು

Update: 2019-12-10 14:02 GMT

ಬೆಂಗಳೂರು, ಡಿ.10: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ನೂತನ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಭೈರತಿ ಬಸವರಾಜ ಮಂಗಳವಾರ ಬೆಳಗ್ಗೆ ಭೇಟಿ ನೀಡಿ, ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಬಿ.ಎ.ಬಸವರಾಜ, ಕೆ.ಆರ್.ಪುರ ಕ್ಷೇತ್ರದ ಜನತೆ ದಾಖಲೆ ಅಂತರದಲ್ಲಿ ನನಗೆ ಗೆಲುವು ನೀಡಿದ್ದಾರೆ. ನನಗೆ ಸಚಿವ ಸ್ಥಾನ ಸಿಗುವುದು ಖಚಿತ. ಯಾವ ಖಾತೆ ನೀಡಬೇಕೆಂಬುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟಿದ್ದು, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಯಾವ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News