×
Ad

ಡಿ.12ರಿಂದ ಮಕ್ಕಳ ಕುರಿತು ತರಬೇತಿ ಕಾರ್ಯಗಾರ

Update: 2019-12-10 20:46 IST

ಉಡುಪಿ, ಡಿ.10: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳಿಗೆ ಸಂಬಂಧಪಟ್ಟ ಕಾಯ್ದೆಗಳು ಮತ್ತು ವಿವಿಧ ಸೇವೆಗಳ ಕುರಿತು 2 ದಿನಗಳ ತರಬೇತಿ ಕಾರ್ಯಗಾರವು ಡಿ.12ರ ಬೆಳಗ್ಗೆ 10ಕ್ಕೆ ಉಡುಪಿ ತಾಲೂಕು ಕಛೇರಿ ಸಬಾಂಗಣದಲ್ಲಿ ನಡೆಯಲಿದೆ.

ಕಾರ್ಯಗಾರವನ್ನು ಉಡುಪಿ ತಾಪಂ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ ಉದ್ಘಾಟಿಸಲಿದ್ದು, ಹಿರಿಯ ಸಿವಿಲ್ ನ್ಯಾಯಧೀಶೆ ಕಾವೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಡುಪಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ಮೋಹನ್‌ರಾಜ್, ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಕಳ ರೋಟರಿ ಆಸ್ಪತ್ರೆಯ ಸ್ತ್ರೀರೋಗ ಪ್ರಸೂತಿ ತಜ್ಞ ಡಾ. ಸತೀಶ್ ನಾಯಕ್, ಉಡುಪಿ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಬಿ.ಕೆ. ನಾರಾಯಣ್, ಕಾರ್ಮಿಕ ಇಲಾಖೆಯ ಎಂ. ಬಾಲಕೃಷ್ಣ, ಕಾಡೂರು ಗ್ರಾಪಂನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News