ಪಾದಯಾತ್ರೆಗೆ ತಡೆ: ಸಿಐಟಿಯು ಖಂಡನೆ

Update: 2019-12-10 15:18 GMT

ಉಡುಪಿ, ಡಿ.10: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಎಲ್‌ಕೆಜಿ ಯುಕೆಜಿ ಶಿಕ್ಷಣವನ್ನು ಅಂಗನವಾಡಿ ಯಲ್ಲಿಯೇ ಆರಂಭಿಸಬೇಕೆಂದು ಒತ್ತಾಯಿಸಿ ಸಾವಿರಾರು ನೌಕರರು ಇಂದು ತುಮಕೂರಿನಿಂದ ಬೆಂಗಳೂರಿನವರೆಗೆ ನಡೆಸಬೇಕಾಗಿದ್ದ ಪಾದಯಾತ್ರೆಗೆ ರಾಜ್ಯ ಸರಕಾರ ತಡೆಯೊಡ್ಡಿರುವ ಕ್ರಮವನ್ನು ಉಡುಪಿ ಜಿಲ್ಲಾ ಸಿಐಟಿಯು ತೀವ್ರವಾಗಿ ಖಂಡಿಸಿದೆ.

ರಾಜ್ಯ ಸರಕಾರ ಅಂಗನವಾಡಿ ನೌಕರರ ಬೇಡಿಕೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅದರ ಬದಲು ಪಾದಯಾತ್ರೆಗೆ ಕಾನೂನು ಸುವ್ಯವಸ್ಥೆಯ ನೆಪ ವೊಡ್ಡಿ ಅನುಮತಿ ನಿರಾಕರಣೆ ಮಾಡುತ್ತಿದೆ. ಒಟ್ಟಾರೆಯಾಗಿ ಚಳವಳಿಯನ್ನು ಹತ್ತಿಕ್ಕುವ ಯತ್ನವನ್ನು ಪೊಲೀಸರ ಮೂಲಕ ನಡೆಸಲಾಗುತ್ತಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್ ಹಾಗೂ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News