ಉನ್ನಾವೋ ಅತ್ಯಾಚಾರ ಪ್ರಕರಣ: ನ್ಯಾಯಕ್ಕಾಗಿ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Update: 2019-12-10 16:04 GMT

ಮಂಗಳೂರು, ಡಿ.10: ಉನ್ನಾವೋ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅತ್ಯಾಚಾರದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರ ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸಹಾಯಹಸ್ತ ಚಾಚದಿದ್ದರಿಂದ ಆಕೆಯ ಹತ್ಯೆಯಾಯಿತು. ತೆಲಂಗಾಣದಲ್ಲಿ ಅತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್ ಮಾಡಿದಂತೆ ಉನ್ನಾವೋ ಅತ್ಯಾಚಾರ ಆರೋಪಿಗಳನ್ನೂ ಶಿಕ್ಷಿಸಬೇಕಾಗಿದೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜೆಸಿಂತಾ ಆಲ್ಫ್ರೆಡ್, ಶಾಂತಲಾ ಗಟ್ಟಿ, ಸುರೇಖಾ ಚಂದ್ರಹಾಸ್, ಶೋಭಾ ಕೇಶವ್, ಮಲ್ಲಿಕಾ ಶೆಟ್ಟಿ, ದೇವಕಿ ಉಳ್ಳಾಲ, ವೃಂದಾ ಪೂಜಾರಿ, ರತಿಕಲಾ, ನಮಿತಾ ಡಿ. ರಾವ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News