ಮೀಸಲಾತಿ ಭಿಕ್ಷೆಯಲ್ಲ, ಸಂವಿಧಾನ ಬದ್ಧ ಹಕ್ಕು: ನ್ಯಾ.ಎಚ್.ಎನ್.ನಾಗಮೋಹನ್‌ದಾಸ್

Update: 2019-12-10 17:41 GMT

ಕಲಬುರಗಿ, ಡಿ.10: ಮೀಸಲಾತಿ ಭಿಕ್ಷೆಯಲ್ಲ, ಅದು ಸಂವಿಧಾನಬದ್ಧ ಹಕ್ಕಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಜನಸಂಖ್ಯೆ ಅನುಗುಣವಾಗಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸುವ ಕುರಿತು ವೈಜ್ಣಾನಿಕ ಮತ್ತು ತಾತ್ವಿಕ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ನ್ಯಾ.ಎಚ್.ಎನ್.ನಾಗಮೋಹನ್‌ದಾಸ್ ತಿಳಿಸಿದ್ದಾರೆ.

ಮಂಗಳವಾರ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನ್ಯಾ.ಎಚ್.ಎನ್.ನಾಗಮೋಹನ್‌ದಾಸ್ ಆಯೋಗವು ಆಯೋಜಿಸಿದ್ದ ಕಲಬುರಗಿ ವಿಭಾಗ ಮಟ್ಟದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಆಯೋಗದ ಹಿರಿಯ ಸಂಶೋಧನಾ ಅಧಿಕಾರಿ ಡಾ.ಚಂದ್ರಶೇಖರ್, ಸಂಶೋಧನಾ ಅಧಿಕಾರಿ ಅನಂತ ನಾಯಕ್, ರಾಜಶೇಖರ ಮೂರ್ತಿ, ಅಯೋಗದ ಸದಸ್ಯ ಕಾರ್ಯದರ್ಶಿ ಸಾಬಿರ್ ಅಹ್ಮದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್.ಸತೀಶ್ ಇದ್ದರು.

ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳಿಂದ ಅಗಮಿಸಿದ ಎಸ್ಸಿ-ಎಸ್ಟಿ ಸಮುದಾಯದ ಚಿಂತಕರು, ಸಂಘಟನೆಗಳ ಪ್ರತಿನಿಧಿಗಳು, ಮುಖಂಡರು, ನೌಕರ ಬಂಧುಗಳು ಆಯೋಗದ ಮುಂದೆ ತಮ್ಮ ಅಹವಾಲು ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News