ಎಚ್‌ಡಿಕೆ ವಿರುದ್ಧ ದಾಖಲಾಗಿದ್ದ 3 ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

Update: 2019-12-10 17:48 GMT

ಬೆಂಗಳೂರು, ಡಿ.10: 2014ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಾಖಲಾಗಿದ್ದ ರಸ್ತೆ ತಡೆ ಆರೋಪ ಸೇರಿ ಮೂರು ಪ್ರತ್ಯೇಕ ಪ್ರಕರಣಗಳನ್ನು ಹೈಕೋಟ್೯ ರದ್ದುಗೊಳಿಸಿ ಆದೇಶಿಸಿದೆ.

ಎಚ್ ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದ ನ್ಯಾ.ಆರ್.ದೇವದಾಸ್ ಅವರಿದ್ದ ಸದಸ್ಯ ನ್ಯಾಯಪೀಠ ಮಂಗಳವಾರ ತೀರ್ಪು ಪ್ರಕಟಿಸಿತು.

ಚುನಾವಣೆ ಪ್ರಚಾರದ ವೇಳೆ ಸಾರ್ವಜನಿಕರಿಂದ ರಸ್ತೆ ತಡೆ ಆಗುವುದು ಸಹಜ. ಆದರೆ, ಎಚ್ ಡಿಕೆ ವಿರುದ್ಧವೇ ಪ್ರಕರಣ ದಾಖಲಿಸಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠವು ಐಪಿಸಿ ಸೆಕ್ಷನ್ 188 ಮತ್ತು ಐಪಿಸಿ ಸೆಕ್ಷನ್  341 ಅಡಿ ದಾಖಲಾಗಿದ್ದ ಮೂರು ಪ್ರತ್ಯೇಕ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶಿಸಿದೆ.

ಎಚ್ ಡಿಕೆ ಅವರು ಚುನಾವಣೆ ಆಯೋಗ ದಾಖಲಿಸಿರುವ ಮೂರು ಪ್ರತ್ಯೇಕ ಪ್ರಕರಣಗಳನ್ನು ರದ್ದುಕೋರಿ ಹೈಕೋಟ್೯ ಮೆಟ್ಟಿಲೇರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News