ವಿಧಾನಸೌಧ ಸಮೀಪದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ

Update: 2019-12-10 18:17 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.10: ವಿಧಾನಸೌಧ ಸಮೀಪದ ಬಹುಮಹಡಿ ಕಟ್ಟಡದ ಎಂಎಸ್ ಬಿಲ್ಡಿಂಗ್ ಕೊಠಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಎಂಎಸ್ ಬಿಲ್ಡಿಂಗ್‌ನ ಎರಡನೆ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಕಟ್ಟಡದ ಸಿಬ್ಬಂದಿ ಬಾಗಿಲು ತೆರೆದಾಗ, ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News