ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆ...

Update: 2019-12-10 18:26 GMT

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದರು. ಅಂಗನವಾಡಿ ಕೇಂದ್ರದಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ, ಮಾತೃಪೂರ್ಣ ಯೋಜನೆಗಾಗಿ ಹೆಚ್ಚಿನ ಸಹಾಯಕಿಯರ ನೇಮಕ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿದ್ದ, ಧರಣಿ ರಾಜ್ಯ ಸರಕಾರ ಅನುಮತಿ ನಿರಾಕರಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಮಹಿಳಾ ನೌಕರರು, ಸಹಾಯಕಿಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರದಿಂದ ತುಮಕೂರಿನ ಸ್ವಾತಂತ್ರ ಚೌಕದಿಂದ ಕಾಲ್ನಡಿಗೆಯಲ್ಲಿ ಸಾಗಿ, ಡಿ.12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಮೈದಾನದಲ್ಲಿ ಜಮಾವಣೆಗೊಂಡು, ಸರಕಾರಕ್ಕೆ ತಮ್ಮ ಬೇಡಿಕೆ ಸಲ್ಲಿಸಲು ನಿರ್ಧರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor