ಆರೋಗ್ಯ ಸ್ಥಿತಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

Update: 2019-12-11 17:54 GMT

ಬೆಂಗಳೂರು, ಡಿ. 11: ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ಧ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬುಧವಾರ ಬೆಳಗ್ಗೆ ಆರೋಗ್ಯ ತಪಾಸಣೆ ಬಳಿಕ ಮನೆಗೆ ಮರಳಿದ್ದ ಅವರು, ಮಧ್ಯಾಹ್ನ ಪುನಃ ಆಸ್ಪತ್ರೆಗೆ ದಾಖಲಾದ ಅವರು ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸೆಗೆ ಒಳಗಾಗಿದ್ದಾರೆ. ನಾಳೆ(ಡಿ.12) ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆಂದು ತಿಳಿಸಲಾಗಿದೆ.

ಸಿದ್ದರಾಮಯ್ಯ ಅವರ ಅರೋಗ್ಯದಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ. ಆದರೆ, ಸಿದ್ದರಾಮಯ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆಂಬ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ.

ಈ ಸಂಬಂಧ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ‘ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ’ ಎಂದು ತಿಳಿಸಿದ್ದಾರೆ.

‘ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ಹತ್ತಿಕ್ಕಲು ಪೊಲೀಸರು ಬಂಧನ, ಬಲಪ್ರಯೋಗದಂತಹ ಅತಿರೇಕದ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಅವರನ್ನು ಮಾತುಕತೆಗೆ ಕರೆದು ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸುತ್ತೇನೆ

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ತಂದೆಯವರಿಗೆ ಹೃದಯ ಸಮಸ್ಯೆ ಇತ್ತು. ಡಾ. ರಮೇಶ್ ಅವರು ಮೊದಲಿನಿಂದ ನೋಡಿಕೊಳ್ಳುತ್ತಿದ್ದರು. ಈ ಹಿಂದೆ ಇದೇ ರೀತಿ ಆಂಜಿಯೋಪ್ಲ್ಯಾಸ್ಟ್ ಆಗಿತ್ತು. ಹೃದಯಕ್ಕೆ ರಕ್ತ ಪರಿಚಲನೆ ಸರಿಯಾಗಿ ಇಲ್ಲ ಅನ್ನೊದನ್ನ ವೈದ್ಯರು ಇಂದು ಬೆಳಗ್ಗೆ ತಪಾಸಣೆ ವೇಳೆ ತಿಳಿಸಿದರು. ಅಂಜಿಯೋ ಗ್ರಾಂ ಮಾಡಿ ಎಂದವರು ಸಲಹೆ ನೀಡಿದರು. ವೈದ್ಯರ ಸಲಹೆ ಮೇರೆಗೆ ಆಂಜಿಯೋಪ್ಲ್ಯಾಸ್ಟ್ ಚಿಕಿತ್ಸಗೆ ತಂದೆಯವರು ಒಳಗಾಗಿದ್ದಾರೆ. ನಾಳೆ ಬೆಳಗ್ಗೆವರೆಗೆ  ತಂದೆಯವರು ತೀವ್ರ ನಿಗಾ ಘಟಕದಲ್ಲಿ ಇರಲಿದ್ದಾರೆ. ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ.
-ಡಾ. ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ ಅವರ ಮಗ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News