ಒಡಿಯೂರು ಗುಡ್ಡ ಕುಸಿತ ಪ್ರಕರಣ: ಮೃತ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

Update: 2019-12-11 14:58 GMT

ಬಂಟ್ವಾಳ, ಡಿ. 11: ಕರೋಪಾಡಿ ಗ್ರಾಮದ ಒಡಿಯೂರು ಗುಡ್ಡ ಕುಸಿತದಿಂದ ಮೃತಪಟ್ಟ, ಗಾಯಗೊಂಡ ಕಾರ್ಮಿಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಧನ ವಿತರಣಾ ಕಾರ್ಯಕ್ರಮ ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು, ಮೃತಪಟ್ಟ ವಿಟ್ಲಪಡ್ನೂರು ಗ್ರಾಮದ ಕಾಪುಮಜಲು ನಿವಾಸಿಯಾದ ರಮೇಶ್ ಮಡಿವಾಳ ಎಂಬವರ ಪತ್ನಿ ಮೋಹಿನಿ ಅವರಿಗೆ 3 ಲಕ್ಷದ ರೂ. ಹಾಗೂ ಗಾಯಾಳುವಿಗೆ 1 ಲಕ್ಷ ಚೆಕ್ ರೂ. ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು.

ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅವರು ಕಾರ್ಯಕ್ರಮದ ವೇದಿಕೆಯಲ್ಲಿ ಪರಿಹಾರ ಘೋಷಿಸಿದ್ದು, ಅದರಂತೆಯೇ ಪರಿಹಾರವನ್ನು ಹಸ್ತಾಂತರಿಸಲಾಯಿತು.

ಈ ಸಂಧರ್ಭದಲ್ಲಿ ವಿಟ್ಲಪಡ್ನೂರು ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರಾದ ನಾಗೇಶ್ ಶೆಟ್ಟಿ, ಅಭಿಷೇಕ್ ರೈ, ಕಂದಯ ನಿರೀಕ್ಷಕ ದಿವಾಕರ್, ವಿಶ್ವನಾಥ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News