ಕ್ರಿಕೆಟ್ ಬೆಟ್ಟಿಂಗ್ ಆರೋಪ: ಓರ್ವನ ಬಂಧನ

Update: 2019-12-11 16:14 GMT

ಬೆಂಗಳೂರು, ಡಿ.11: ಹಣವನ್ನು ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.51 ಲಕ್ಷ ರೂ. ನಗದು, ಮೊಬೈಲ್ ಜಪ್ತಿ ಮಾಡಿದ್ದಾರೆ.

ಕತ್ರಿಗುಪ್ಪೆಯ ನಿವಾಸಿ ಸಾಗರ್(33) ಬಂಧಿತ ಆರೋಪಿ ಎಂದು ಸಿಸಿಬಿ ತಿಳಿಸಿದೆ.

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರ ಸರಣಿ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ದೇಶದ ತಂಡಗಳ ನಡುವೆ ನಡೆದ ಅಂತರ್‌ರಾಷ್ಟ್ರೀಯ ಪಂದ್ಯಗಳ ಸೋಲು ಗೆಲುವಿನ ಕುರಿತು loutsbook24.com ಎಂಬ ಆ್ಯಪ್ ಮೂಲಕ ಬೆಟ್ಟಿಂಗ್ ಮಾಡಿಕೊಂಡು ಮೊಬೈಲ್ ಮೂಲಕ ಹಣ ಪಣವಾಗಿಟ್ಟುಕೊಂಡು, ಜೂಜಾಟ ನಡೆಸುತ್ತಿದ್ದರು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News