ಮೂಡುಬಿದಿರೆ : ಡಿ.13ರಿಂದ ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Update: 2019-12-11 16:54 GMT

ಮೂಡುಬಿದಿರೆ: ಕರ್ನಾಟಕ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿಯೇಶನ್, ದ.ಕ. ಜಿಲ್ಲಾ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿಯೇಶನ್ ಇವರ ಆಶ್ರಯದಲ್ಲಿ ಡಿ. 13, 14 ಮತ್ತು 15 ರಂದು ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್ 2019 ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ನಡೆಯಲಿದೆ.

ರಾಜ್ಯ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿಯೇಶನ್‍ನ ಅಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

3 ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧಾ ಕೂಟದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ 1200ಕ್ಕೂ ಅಧಿಕ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಈ ಸ್ಪರ್ಧಾ ಕೂಟವು ಸಬ್ ಜ್ಯೂನಿಯರ್, ಕ್ಯಾಡೆಟ್, ಜ್ಯೂನಿಯರ್, ಸೀನಿಯರ್ ವಿಭಾಗಗಳಾಗಿ ನಡೆಯಲಿದೆ. ಮಹಿಳಾ ಹಾಗೂ ಪುರುಷರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಾ ಕೂಟಗಳು ನಡೆಯಲಿವೆ.

ಈ ಕೂಟದಲ್ಲಿ ಮೊದಲ ಸ್ಥಾನ ಗಳಿಸಿದವರು ಮುಂದಿನ ಫೆಬ್ರವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು.

ಈ ಸ್ಪರ್ಧಾ ಕೂಟದಲ್ಲಿ 150ಕ್ಕೂ ಅಧಿಕ ಮಂದಿ ತೀರ್ಪುಗಾರರು ಭಾಗವಹಿಸಲಿದ್ದಾರೆ. ಡಿ.13 ರಂದು ನೊಂದಾವಣೆ ಹಾಗೂ ರೆಫ್ರಿ ತರಬೇತಿ, ರೆಫ್ರಿ ಪರೀಕ್ಷೆ ನಡೆಯಲಿದೆ. ಡಿ.14 ರಂದು ಬೆಳಿಗ್ಗೆ 9 ಗಂಟೆಗೆ ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಡೊ ಕರಾಟೆ ಸ್ಪೋಟ್ರ್ಸ್ ಅಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಅಧ್ಯಕ್ಷತೆ ವಹಿಸಲಿದ್ದಾರೆ. ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಡಿ 15 ರಂದು ಸಂಜೆ 5 ಗಂಟೆಗೆ ಸಮಾರೋಪ ನಡೆಯಲಿದೆ.

ಕರ್ನಾಟಕ ಕರಾಟೆ ಡೊ ಸ್ಪೋರ್ಟ್ಸ್ ಅಸೋಸಿಯೇಶನ್‍ನ ಉಪಾಧ್ಯಕ್ಷ ಸತೀಶ್ ಬೆಳ್ಮಣ್, ಡಬ್ಲ್ಯೂಕೆಎಫ್‍ನ ತೀರ್ಪುಗಾರ ಡೊಮಿನಿಕ್ ಸೇವಿಯೋ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಶನ್‍ನ ಅಧ್ಯಕ್ಷ ಮೊಹಮ್ಮದ್ ನದೀಮ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್, ರಾಜ್ಯ ಕ್ರೀಡಾ ಕಾರ್ಯದರ್ಶಿ ರವಿ ಸಾಲ್ಯಾನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News