ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

Update: 2019-12-12 07:35 GMT

ಬೆಂಗಳೂರು, ಡಿ.12: ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜಾರ್ಖಂಡ್ ಚುನಾವಣಾ ಪ್ರಚಾರದಲ್ಲಿದ್ದಾರೆ. ಅವರ ಜತೆ ಮಾತನಾಡಲು ಸಾಧ್ಯವಾಗಿಲ್ಲ. ಮೂರ್ನಾಲ್ಕು ದಿನಗಳ ಬಳಿಕ ಅಮಿತ್ ಶಾ ಕಾಲಾವಕಾಶ ಕೋರಿ ಭೇಟಿ ಮಾಡಿದ ಬಳಿಕ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ದೆಹಲಿಗೆ ಭೇಟಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News