ಇರಾ ಗ್ರಾಪಂ‌ ಅಧ್ಯಕ್ಷರಿಗೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Update: 2019-12-12 17:44 GMT
ತನ್ವಿರ್, ಬಶೀರ್, ಕಬೀರ್

ಬಂಟ್ವಾಳ, ಡಿ. 12: ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.

ಮಂಚಿ ನಿವಾಸಿಗಳಾದ ಬಶೀರ್, ಕಬೀರ್, ತನ್ವಿರ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಘಟನೆಯ ವಿವರ:

ನ. 30ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಕಟ್ಟೆಯ ಬಳಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಅವರ ಮೇಲೆ 3 ಜನ ಹಲ್ಲೆ ನಡೆಸಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣ ನಡೆದು 11 ದಿನಗಳ ಬಳಿಕ  ಪೊಲೀಸರು ಮೂವರು ಆರೋಪಿಗಳನ್ನು ಬುಧವಾರ ಮಂಚಿಯಲ್ಲಿ ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ‌

ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನ ದಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ಎಸ್. ಐ.ಪ್ರಸನ್ನ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಜನಾರ್ದನ, ನಜೀರ್, ಶೇಖರ್ ಚಾವಗಲ್ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News