11 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶ, ದಂಡ ವಸೂಲಿ

Update: 2019-12-12 14:09 GMT

ಉಡುಪಿ, ಡಿ.12: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲದ ವಿವಿಧ ಅಂಗಡಿಗಳಿಗೆ ಸಾರ್ವಜನಿಕ ದೂರಿನ ಮೇರೆಗೆ ಬುಧವಾರ ಹಠಾತ್ ದಾಳಿ ನಡೆಸಿದ ಉಡುಪಿ ನಗರಸಭೆ ಅಧಿಕಾರಿಗಳ ತಂಡ ಒಟ್ಟು 11 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ, 13,000ರೂ. ದಂಡ ವಸೂಲಿ ಮಾಡಿದೆ.

ಸಾರ್ವಜನಿಕರು ಹಾಗೂ ಉದ್ದಿಮೆದಾರರು ನಾನ್ ಓವನ್ ಚೀಲಗಳು ಸೇರಿದಂತೆ ನಿಷೇದಿತ ಪ್ಲಾಸ್ಟಿಕ್ ಚೀಲಗಳು ಮತ್ತು ಇನ್ನಿತರ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಮಾರಾಟ ಇನ್ನು ಮುಂದೆಯೂ ಕಂಡುಬಂದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ ಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ಎಚ್ಚರಿಕೆ ನೀಡಿದ್ದಾರೆ.
ಈ ತಂಡದಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಶಶಿ ರೇಖ ಮತ್ತು ಕರುಣಾಕರ ವಿ. ಹಾಗೂ ಸ್ಯಾನಿಟರಿ ಸೂಪರ್ ವೈಸರ್‌ಗಳಾದ ಮನೋಹರ್ ಕರ್ಕಡ, ನಾಗಾರ್ಜುನ, ಶ್ರೀಕಾಂತ್, ಸುದೇಶ್, ಶರಣಪ್ಪ ಮೊದಲಾದವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News