ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಗ್ಲಾ ಮಾಜಿ ಪ್ರಧಾನಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

Update: 2019-12-12 15:48 GMT

ಢಾಕಾ (ಬಾಂಗ್ಲಾದೇಶ), ಡಿ. 12: ಝಿಯಾ ಚಾರಿಟೇಬಲ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಝಿಯಾ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಆ ದೇಶದ ಸುಪ್ರೀಂ ಕೋರ್ಟ್ ಗುರುವಾರ ತಳ್ಳಿ ಹಾಕಿದೆ.

ಮುಖ್ಯ ನ್ಯಾಯಾಧೀಶ ಸೈಯದ್ ಮಹ್ಮೂದ್ ಹುಸೈನ್ ನೇತೃತ್ವದ ಮೇಲ್ಮನವಿ ವಿಭಾಗದ ನ್ಯಾಯಪೀಠವೊಂದು ಈ ತೀರ್ಪು ನೀಡಿದೆ. ಖಾಲಿದಾ ಝಿಯಾಗೆ ಅವರು ಈಗ ಪಡೆಯುತ್ತಿರುವುದಕ್ಕಿಂತ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ ಎಂದು ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಎರಡು ಬಾರಿಯ ಪ್ರಧಾನಿ ಖಾಲಿದಾ, ಝಿಯಾ ಆರ್ಫನೇಜ್ ಟ್ರಸ್ಟ್ ಮತ್ತು ಝಿಯಾ ಚಾರಿಟೇಬಲ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣಗಳಲ್ಲಿ ಫೆಬ್ರವರಿ ತಿಂಗಳಿನಿಂದ 17 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಝಿಯಾ ಚಾರಿಟೇಬಲ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಜುಲೈ 31ರಂದು ರದ್ದುಪಡಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News