ಡಿ.14: ‘ಪಾಪು ಗಾಂಧಿ-ಗಾಂಧಿ ಬಾಪು ಆದ ಕತೆ’ ಪ್ರಬಂಧ ಸ್ಪರ್ಧೆ ಪ್ರಮಾಣ ಪತ್ರ ವಿತರಣೆ

Update: 2019-12-12 16:12 GMT

ಮಣಿಪಾಲ.ಡಿ.12:ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗಾಂಧಿ ಅದ್ಯಯನ ಕೇಂದ್ರ ಎಂಜಿಎಂ ಕಾಲೇಜು ಉಡುಪಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು ಮತ್ತು ಸೆಲ್ಕೋ ಫೌಂಡೇಶನ್ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕತೆ’ ಹಾಗೂ ‘ಇದು ಬರಿಯ ಬಟ್ಟೆಯಲ್ಲ ಭಾರತದ ಬಾವುಟ’ ಕೃತಿಗಳ ಬಗ್ಗೆ ಜಿಲ್ಲೆಯ ವಿವಿಧ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಉತ್ತಮ ನಿರ್ವಹಣೆ ತೋರಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ ಡಿ.14ರ ಶನಿವಾರ ಬೆಳಗ್ಗೆ 10:00ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಸಮಾರಂಭದ ಅದ್ಯಕ್ಷತೆಯನ್ನು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಪ್ರೇಮಚಂದ್ರ ಕೆ. ತಿಂಗಳಾಯ ವಹಿಸಲಿದ್ದಾರೆ. ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಸಂಯೋಜನಾಧಿಕಾರಿ ಹಾಗೂ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ, ಸೆಲ್ಕೋ ಸಂಸ್ಥೆಯ ಮಹಾಪ್ರಬಂಧಕ ಜಗದೀಶ್ ಪೈ ಮತ್ತು ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನೀತ್ ರಾವ್ ವುುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಬಿವಿಟಿಯಲ್ಲಿ ತರಬೇತಿ ಪಡೆದ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಭಾರತಿೀಯ ವಿಕಾಸ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News