ನಿತ್ಯಾನಂದ ವಿರುದ್ಧದ ಅತ್ಯಾಚಾರ ಆರೋಪ: ರಾಮನಗರ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ

Update: 2019-12-12 16:26 GMT

ಬೆಂಗಳೂರು, ಡಿ.12: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.

ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ದೂರುದಾರ ಕೆ.ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ರಾಮನಗರ ಕೋರ್ಟ್‌ನಲ್ಲಿರುವ ಎಲ್ಲ ದಾಖಲೆಗಳನ್ನು ಹಾಜರುಪಡಿಸಲು ರಿಜಿಸ್ಟ್ರಾರ್‌ಗೆ ಸೂಚಿಸಿದ ನ್ಯಾಯಪೀಠವು, ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆಗೆ ಡಿ.18ರವರೆಗೆ ತಡೆ ನೀಡಿತು.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮೀಜಿ ಅವರನ್ನು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸುವ ಬದಲು ಪ್ರಾಸಿಕ್ಯೂಷನ್ ನನ್ನ ವಿರುದ್ಧವೇ ಪ್ರತಿಕೂಲ ಕ್ರಮ ಕೈಗೊಳ್ಳುತ್ತಿದೆ. ಹಾಗೂ ವಿಚಾರಣೆಗೆ ನಿತ್ಯಾನಂದ ಸ್ವಾಮೀಜಿಯನ್ನು ಈತನಕ ಹಾಜರುಪಡಿಸಿಲ್ಲ. ಬದಲಿಗೆ ಸಾಕ್ಷಿದಾರರಿಗೇ ವಾರಂಟ್ ಹೊರಡಿಸಲಾಗುತ್ತಿದೆ. ವಾರಂಟ್ ರಿಕಾಲ್ ಮಾಡಿಕೊಳ್ಳಲು ಪ್ರಾಸಿಕ್ಯೂಟರ್ ಸಹಕರಿಸುತ್ತಿಲ್ಲ ಎಂದು ಪ್ರಕರಣದ ದೂರುದಾರ ಕೆ.ಲೆನಿನ್ ಹೈಕೋರ್ಟ್‌ಗೆ ದೂರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News