ಡಿ.13: ಮಕ್ಕಳ ಸಂವಾದ

Update: 2019-12-12 16:50 GMT

ಮಂಗಳೂರು, ಡಿ.12: ಮಕ್ಕಳ ಗ್ರಾಮಸಭೆಯನ್ನು ನಡೆಸಬೇಕು ಎಂದು ಸರಕಾರ ಸುತ್ತೋಲೆ ಹೊರಡಿಸಿದ್ದರೂ ಕೂಡ ಸರಿಯಾಗಿ ಪಾಲನೆಯಾಗದ ಹಿನ್ನಲೆಯಲ್ಲಿ ಮತ್ತು ಮಕ್ಕಳು ತಮ್ಮ ಅಹವಾಲುಗಳನ್ನು ಅಧಿಕಾರಿಗಳ ಮುಂದಿಡುವ ಸಲುವಾಗಿ ಮಂಗಳೂರು ಮಹಾನಗರ ಪಾಲಿಕೆಯು ಅಧಿಕಾರಿಗಳೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮವನ್ನು ಡಿ.13ರಂದು ಬೆಳಗ್ಗೆ 10 ಗಂಟೆಗೆ ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿರುವ ಎನ್‌ಜಿಒ ಹಾಲ್‌ನಲ್ಲಿ ಆಯೋಜಿಸಲಾಗಿದೆ.

ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮನಪಾ ಉಪಾಯುಕ್ತೆ ಗಾಯತ್ರಿ ಎನ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜ, ಮಕ್ಕಳ ಮಾಸೋತ್ಸವ ಸಮಿತಿಯ ದ.ಕ ಜಿಲ್ಲಾಕ್ಷ ಸುರೇಶ್ ಶೆಟ್ಟಿ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷ ಜಾಕೀರ್ ಹುಸೇನ್, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಅನಂತರಾಮ ಹೇರಳೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News