ಪೊಲೀಸ್ ಖಾಲಿ ಹುದ್ದೆಗಳ ಭರ್ತಿ ವಿಚಾರ: ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ ರಾಜ್ಯ ಸರಕಾರ

Update: 2019-12-12 17:25 GMT

ಬೆಂಗಳೂರು, ಡಿ.12: ಸೇವಾ ಭಡ್ತಿ ಆಧರಿಸಿ ಡಿವೈಎಸ್ಪಿ, ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್‌ಗಳ 2,868 ಹದ್ದೆ ಹಾಗೂ ಖಾಲಿ ಇರುವ 16,838 ಪಿಎಸ್‌ಐ, ಕಾನ್ಸ್‌ಟೇಬಲ್‌ಗಳ ಹುದ್ದೆಯನ್ನು 2019ರ ನವೆಂಬರ್‌ನಿಂದ 2020ರ ಮಾರ್ಚ್ ವೇಳೆಗೆ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿ ಖಾಲಿ ಇರುವ ವಿವಿಧ ಪೊಲೀಸ್ ಹುದ್ದೆಗಳ ಭರ್ತಿಗೆ ನಿಗದಿಪಡಿಸಿದ ಕಾಲಮಿತಿ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರಕಾರ ಪ್ರಮಾಣ ಪತ್ರ ಸಲ್ಲಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾಯಮೂರ್ತಿ ರವಿ ಮಳಿಮಠ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಹುದ್ದೆ ಭರ್ತಿಗೆ ಆ.9ರಂದು ಹೈಕೋರ್ಟ್ ನೀಡಿದ್ದ ಆದೇಶದ ಅನುಪಾಲನೆ ಕುರಿತು ಗೃಹ ಇಲಾಖೆ ಅಧೀನ ಕಾರ್ಯದರ್ಶಿ ವಿ.ಸುಶೀಲಾ ಸಲ್ಲಿಸಿದ ಪ್ರಮಾಣ ಪತ್ರವನ್ನು ಸರಕಾರದ ಪರ ವಕೀಲರು ನ್ಯಾಯಪೀಠಕ್ಕೆ ಹಾಜರುಪಡಿಸಿದರು. ಈ ವೇಳೆ ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳದೆ ಬಿಡುವುದು ಸರಿಯಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News