ಮಂಗಳೂರು: ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆ

Update: 2019-12-13 05:15 GMT

ಮಂಗಳೂರು, ಡಿ.13: ಯುವಕನೋರ್ವ ಚಲಾಯಿಸುತ್ತಿದ್ದ ಕಾರಿನಲ್ಲಿ ಯುವತಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಕುಳಾಯಿ ಬಳಿ ಗುರುವಾರ ಸಂಜೆ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಚಾಲಕನ ಸಮೀಪ ಯುವತಿಯಲ್ಲಿ ಅನುಮಾನಾಸ್ಪದವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ವಾಹನ ಸವಾರರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಯುವಕ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕಾರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಯುವಕ ಕಾರಿನಿಂದ ಇಳಿದು ಪರಾರಿಯಾಗಿದ್ದಾನೆ. ಬಳಿಕ ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಈ ಬಗ್ಗೆ ಸುರತ್ಕಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News