ಇಂದ್ರಪ್ರಸ್ಥ ವಿದ್ಯಾರ್ಥಿಗಳಿಂದ ಅಪರಾಧ ತಡೆ ಜಾಗೃತಿ ಜಾಥಾ

Update: 2019-12-13 08:51 GMT

ಉಪ್ಪಿನಂಗಡಿ, ಡಿ.13: ಇಲ್ಲಿನ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳಿಂದ ಅಪರಾಧ ತಡೆ ಜಾಗೃತಿ ಜಾಥಾ ಉಪ್ಪಿನಂಗಡಿಯಲ್ಲಿ ನಡೆಯಿತು.

ವಿವಿಧ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಉಪ್ಪಿನಂಗಡಿ ಪೇಟೆಯಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ರಸ್ತೆ ನಿಯಮಗಳನ್ನು ಪಾಲಿಸುವಂತೆ ಹಾಗೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿಕೊಂಡರು.

ಜಾಥಾದಲ್ಲಿ ವಿದ್ಯಾರ್ಥಿಗಳೊಂದಿಗೆ ಡಿವೈಎಸ್ಪಿ ದಿನಕರ ಶೆಟ್ಟಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಉಪನಿರೀಕ್ಷಕ ನಾಗೇಶ್ ಕದ್ರಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ, ಠಾಣಾ ಸಿಬ್ಬಂದಿ ಹಾಗೂ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲ ಜೋಸ್ ಎಂ.ಜೆ., ಶಾಲಾ ಶಿಕ್ಷಕರು ಪಾಲ್ಗೊಂಡರು. ಬಳಿಕ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News