'ಫೋರ್ಬ್ಸ್' ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್

Update: 2019-12-13 09:32 GMT

ಹೊಸದಿಲ್ಲಿ: ಜಗತ್ತಿನ 100 ಅತ್ಯಂತ ಪ್ರಭಾವಿ ಮಹಿಳೆಯರ ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಥಮ ಬಾರಿಗೆ ಸ್ಥಾನ ಪಡೆದಿದ್ದಾರೆ.

ಅವರ ಜತೆ ಎಚ್‍ಸಿಎಲ್ ಕಾರ್ಪೊರೇಶನ್ ಸಿಇಒ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರ ಹಾಗೂ ಬಯೋಕಾನ್ ಸ್ಥಾಪಕಿ ಕಿರಣ್ ಮಝುಮ್ದಾರ್ ಶಾ ಕೂಡ  ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನಿರ್ಮಲಾ ಸೀತಾರಾಮನ್ 34 ನೇ ಸ್ಥಾನ ಪಡೆದಿದ್ದರೆ, ರೋಶನಿ 54ನೇ ಸ್ಥಾನ ಹಾಗೂ  ಕಿರಣ್ ಮಝುಮ್ದಾರ್ ಶಾ  65ನೇ ಸ್ಥಾನ ಗಳಿಸಿದ್ದಾರೆ.

ಫೋರ್ಬ್ಸ್ 2019 ಜಗತ್ತಿನ 100 ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಮೊದಲ ಸ್ಥಾನ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಪಡೆದಿದ್ದರೆ, ನಂತರದ ಸ್ಥಾನ ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ತೀನ್ ಲಗಾರ್ಡೆ ಪಡೆದಿದ್ದಾರೆ. ಮೂರನೇ ಸ್ಥಾನ ಅಮೆರಿಕಾದ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೊಸಿ ಅವರಿಗೆ ಹೋಗಿದೆ. ಈ ಪಟ್ಟಿಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ 29ನೇ ಸ್ಥಾನ ಪಡೆದಿದ್ದಾರೆ.

ಫೋರ್ಬ್ಸ್ ಪಟ್ಟಿಯಲ್ಲಿರುವ ಇತರ  ಪ್ರಮುಖರೆಂದರೆ ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್ ಫೌಂಡೇಶನ್  ಸಹ ಅಧ್ಯಕ್ಷೆ ಮೆಲಿಂಡಾ ಗೇಟ್ಸ್ (6), ಐಬಿಎಂ ಸಿಇಒ ಗಿನ್ನಿ ರೊಮೆಟ್ಟಿ (9), ಫೇಸ್ಬುಲ್ ಸಿಒಒ ಶೆರಿಲ್ ಸ್ಯಾಂಡ್‍ಬರ್ಗ್ (18), ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಆರ್ಡೆರ್ನ್ (38), ಡೊನಾಲ್ಡ್ ಟ್ರಂಪ್ ಅವರ ಹಿರಿಯ ಪುತ್ರಿ  ಹಾಗೂ ಅಧ್ಯಕ್ಷರ ಸಲಹೆಗಾರ್ತಿ ಇವಾಂಕ ಟ್ರಂಪ್ (42), ಗಾಯಕಿಯರಾದ ರಿಹಾನ್ನ (61), ಬಿಯಾನ್ಸ್ (66) ಹಾಗೂ ಟೇಲರ್ ಸ್ವಿಫ್ಟ್ (71) ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ (81) ಹಾಗೂ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ (100) ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News