ಪಳಿಕೆ ಘನತ್ಯಾಜ್ಯ ವಿಲೇವಾರಿ ಘಟಕ: 2.10 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ

Update: 2019-12-13 11:10 GMT

ವಿಟ್ಲ, ಡಿ. 13: ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. 

ಅವರು ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಳಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ವಚ್ಛಭಾರತ ಮಿಷನ್ ಯೋಜನೆಯಡಿಯಲ್ಲಿ 2.10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ ನೇರವೇರಿಸಿ ಮಾತನಾಡಿದರು. 

ವಿಟ್ಲ ಪಟ್ಟಣ ಪಂಚಾಯತ್‍ಯಾಗಿ ಮೇಲ್ದರ್ಜೆಗೇರಿದ್ದು, ನಿರಂತರ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿಯ ಮೂಲಭೂತ ಉದ್ದೇಶಕ್ಕೆ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ವಿಟ್ಲ ತಾಲೂಕು ಕೇಂದ್ರ ಅಥವಾ ಪುರಸಭೆಯಾಗಿ ಮೇಲ್ದರ್ಜೆಗೇರುವ ಉದ್ದೇಶದಿಂದ ಕಾಯಕಲ್ಪ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಕಾರ್ಯಾಲಯಕ್ಕೆ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು. 

2.10 ಕೋಟಿ ಅನುದಾನದಲ್ಲಿ ಸಿವಿಲ್ ಕಾಮಗಾರಿ ಹಾಗೂ 1.17 ಕೋಟಿ ಅನುದಾನದಲ್ಲಿ ವಾಹನ ಹಾಗೂ ಯಂತ್ರೋಪಕರಣ ಖರೀದಿಸಲಾಗುತ್ತದೆ. ಸಿವಿಲ್ ಕಾಮಗಾರಿಯಲ್ಲಿ ವಿಂಡ್ರೋ ಪ್ಲಾಟ್ ಫಾರಂ ರಚನೆ, ಸ್ಯಾನಿಟರಿ ಲ್ಯಾಂಡ್‍ಫಿಲ್ ರಚನೆ, ಆವರಣಗೋಡೆ, ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ 1.17 ಕೋಟಿ ರೂ. ಅನುದಾನದಲ್ಲಿ ಪುಶ್‍ಕಾರ್ಟ್, ಬೇಲಿಂಗ್ ಯೂನಿಟ್, ಸ್ಕ್ರೀನಿಂಗ್ ಟ್ರೋಮಲ್, ಜೆಸಿಬಿ, ಟಾಟಾ ವಾಹನ, ಆಟೋ ಟಿಪ್ಪರ್, ಟ್ರಾಕ್ಟರ್ ಟ್ರೈಲರ್‍ಗಳು ಖರೀದಿಸುವ ಮೂಲಕ ಕಾಮಗಾರಿ ನಡೆಯಲಿದೆ ಎಂದು ಎಂಜಿನಿಯರ್ ಮಾಹಿತಿ ನೀಡಿದರು. 
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ಅರುಣ್ ಎಂ. ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರಾಮ್‍ದಾಸ್ ಶೆಣೈ, ಶ್ರೀಕೃಷ್ಣ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ, ಲತಾವೇಣಿ, ಇಂದಿತಾ ಅಡ್ಯಾಳಿ, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಎಂಜಿನಿಯರ್ ಶ್ರಿಧರ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಪ್ರಧಾನ ಕಾರ್ಯದರ್ಶಿ ಉದಯ ಆಲಂಗಾರು, ಜೊತೆ ಕಾರ್ಯದರ್ಶಿ ಜಗದೀಶ ಪಾಣೆಮಜಲು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News